Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 144

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ.
2ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ.
3ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು? ನೀವು ಅವನನ್ನು ನೆನಸುವ ಹಾಗೆ ಮಾನವನು ಎಷ್ಟರವನು?
4ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.
5ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು.
6ಮಿಂಚಿನಿಂದ ವೈರಿಗಳನ್ನು ಚದರಿಸಿರಿ. ನಿಮ್ಮ ಬಾಣಗಳನ್ನು ಎಸೆದು, ಅವರನ್ನು ದಂಡಿಸಿರಿ.
7ನಿಮ್ಮ ಕೈಯನ್ನು ಉನ್ನತದಿಂದ ಚಾಚಿ, ಮಹಾ ಜಲದಿಂದಲೂ, ಪರದೇಶದವರ ಕೈಯಿಂದಲೂ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ.
8ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ, ಅವರ ಬಲಗೈ ಮೋಸದ ಬಲಗೈ ಆಗಿದೆ.
9ಓ ದೇವರೇ, ನಾನು ಹೊಸಹಾಡನ್ನು ನಿಮಗೆ ಹಾಡುವೆನು; ಹತ್ತು ತಂತಿಗಳ ವಾದ್ಯದಿಂದ ನಿಮ್ಮನ್ನು ಕೀರ್ತಿಸುವೆನು.
10ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ.
11ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ.
12ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ.
13ನಮ್ಮ ಉಗ್ರಾಣಗಳು ನಾನಾ ವಿಧವಾದ ಧಾನ್ಯಗಳನ್ನು ತುಂಬಿರಲಿ. ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಹೊಲಗಳಲ್ಲಿ ಹತ್ತು ಸಹಸ್ರವಾಗಿ ಹೆಚ್ಚಲಿ.
14ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ.
15ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.