Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 146

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಯೆಹೋವ ದೇವರನ್ನು ಸ್ತುತಿಸು.
2ನಾನು ಬದುಕುವವರೆಗೂ ಯೆಹೋವ ದೇವರನ್ನು ಸ್ತುತಿಸುವೆನು; ನಾನು ಇರುವವರೆಗೂ ನನ್ನ ದೇವರನ್ನು ಸ್ತುತಿಸುವೆನು.
3ಅಧಿಪತಿಗಳಲ್ಲಿಯೂ ರಕ್ಷಿಸಲಾಗದ ಮಾನವರಲ್ಲಿಯೂ ಭರವಸವಿಡಬೇಡಿರಿ.
4ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ, ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ.
5ಯಾಕೋಬನ ದೇವರನ್ನು ತಮ್ಮ ಸಹಾಯಕರಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಯೆಹೋವ ದೇವರ ಮೇಲೆ ನಿರೀಕ್ಷೆ ಇಡುವನು.
6ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದ ದೇವರೇ ಎಂದೆಂದಿಗೂ ನಂಬಿಗಸ್ತರು.
7ಅವರು ದಬ್ಬಾಳಿಕೆಯಾದ ನ್ಯಾಯತೀರಿಸುತ್ತಾರೆ, ಹಸಿದವರಿಗೆ ಆಹಾರವನ್ನು ಕೊಡುತ್ತಾರೆ. ಯೆಹೋವ ದೇವರು ಸೆರೆಯವರನ್ನು ಬಿಡಿಸುತ್ತಾರೆ.
8ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ. ಅವರು ದೀನರನ್ನು ಎತ್ತುತ್ತಾರೆ. ನೀತಿವಂತರನ್ನು ಪ್ರೀತಿಸುತ್ತಾರೆ.
9ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.
10ಚೀಯೋನೇ, ನಿಮ್ಮ ದೇವರಾದ ಯೆಹೋವ ದೇವರು ತಲತಲಾಂತರಕ್ಕೂ, ಸರ್ವ ಸಂತತಿಗಳವರೆಗೂ ಆಳಿಕೆ ಮಾಡುತ್ತಾರೆ. ಯೆಹೋವ ದೇವರಿಗೆ ಸ್ತೋತ್ರ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.