Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 147

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದು; ದೇವರನ್ನು ಸ್ತುತಿಸುವುದು ರಮ್ಯವೂ, ಯೋಗ್ಯವೂ ಆಗಿದೆ.
2ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ.
3ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ, ಅವರ ಗಾಯಗಳನ್ನು ಕಟ್ಟುತ್ತಾರೆ.
4ದೇವರು ನಕ್ಷತ್ರಗಳ ಸಂಖ್ಯೆಯನ್ನು ನಿರ್ಧರಿಸುತ್ತಾರೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆಯುತ್ತಾರೆ.
5ನಮ್ಮ ಯೆಹೋವ ದೇವರು ದೊಡ್ಡವರು, ಬಹು ಶಕ್ತರು; ಅವರ ವಿವೇಕಕ್ಕೆ ಎಣೆಯಿಲ್ಲ.
6ಯೆಹೋವ ದೇವರು ಸಾತ್ವಿಕರನ್ನು ಉದ್ಧರಿಸುತ್ತಾರೆ; ದುಷ್ಟರನ್ನು ದಂಡಿಸುತ್ತಾರೆ.
7ಯೆಹೋವ ದೇವರಿಗೆ ಸ್ತೋತ್ರಗೀತೆ ಹಾಡಿರಿ, ನಮ್ಮ ದೇವರನ್ನು ಕಿನ್ನರಿಯಿಂದ ಸ್ತುತಿಸಿರಿ.
8ದೇವರು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾರೆ; ಭೂಮಿಗೆ ಮಳೆಯನ್ನು ಸುರಿಸುತ್ತಾರೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾರೆ.
9ದೇವರು ಪಶುಗಳಿಗೂ, ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ.
10ಕುದುರೆಯ ಶಕ್ತಿಯಲ್ಲಿ ಅವರಿಗೆ ಇಷ್ಟವಿಲ್ಲ; ಶೂರನ ಕಾಲ್ಬಲವನ್ನು ಮೆಚ್ಚುವುದಿಲ್ಲ.
11ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.
12ಯೆರೂಸಲೇಮೇ, ಯೆಹೋವ ದೇವರನ್ನು ಸ್ತುತಿಸು; ಚೀಯೋನೇ, ನಿಮ್ಮ ದೇವರನ್ನು ಸ್ತುತಿಸು.
13ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ.
14ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ.
15ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾರೆ; ದೇವರ ವಾಕ್ಯವು ಬಹು ತೀವ್ರವಾಗಿ ಓಡುತ್ತದೆ.
16ದೇವರು ಹಿಮವನ್ನು ಉಣ್ಣೆಯ ಹಾಗೆ ಹರಡುತ್ತಾರೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
17ದೇವರು ನೀರುಗಡ್ಡೆಯನ್ನು ಕಲ್ಲು ಹರಳುಗಳಂತೆ ಸುರಿದು ಹಾಕುತ್ತಾರೆ; ಅವರು ಕಳುಹಿಸುವ ಚಳಿಯ ಮುಂದೆ ಯಾರು ನಿಲ್ಲುವರು?
18ದೇವರು ತಮ್ಮ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾರೆ; ದೇವರು ಗಾಳಿಯನ್ನು ಬೀಸುವಂತೆ ಮಾಡುತ್ತಾರೆ; ನೀರು ಹರಿಯುತ್ತದೆ.
19ದೇವರು ಯಾಕೋಬ್ಯರಿಗೆ ತಮ್ಮ ವಾಕ್ಯವನ್ನು ಪ್ರಕಟಿಸುತ್ತಾರೆ, ಇಸ್ರಾಯೇಲರಿಗೆ ತಮ್ಮ ತೀರ್ಪುಗಳನ್ನೂ, ತನ್ನ ನ್ಯಾಯವಿಧಿಗಳನ್ನೂ ಪ್ರಕಟಿಸುತ್ತಾರೆ.
20ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.