Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 16

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ನನ್ನ ದೇವರೇ, ನನ್ನನ್ನು ಕಾಪಾಡು, ಏಕೆಂದರೆ ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ.
2ನಾನು ಯೆಹೋವ ದೇವರಿಗೆ, “ನೀವೇ ನನ್ನ ಕರ್ತ; ನಿಮ್ಮನ್ನು ಬಿಟ್ಟು ನನಗಿಲ್ಲ ಒಳಿತು,” ಎಂದು ಹೇಳಿದೆನು.
3ಭೂಲೋಕದಲ್ಲಿರುವ ದೇವಜನರ ಕುರಿತು, “ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು.
4ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ.
5ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ; ನನ್ನ ಸ್ವಾಸ್ತ್ಯವನ್ನು ಸುರಕ್ಷಿತವಾಗಿ ಇಡುವವರು ನೀವೇ.
6ನನ್ನ ಪಾಲಿಗೆ ಬಂದ ಮೇರೆಯ ಸ್ಥಳವೂ ಸುಂದರವಾದದ್ದು; ನಿಶ್ಚಯವಾಗಿಯೂ, ನನಗೆ ದೊರೆತ ಸ್ವತ್ತು ಆನಂದಕರವಾದದ್ದು.
7ನನಗೆ ಸಮಾಲೋಚನೆ ನೀಡುತ್ತಿರುವ ಯೆಹೋವ ದೇವರನ್ನು ನಾನು ಸ್ತುತಿಸುತ್ತಿರುವೆನು; ರಾತ್ರಿಯಲ್ಲಿಯೂ ನನ್ನ ಹೃದಯವು ನನಗೆ ಬೋಧಿಸುತ್ತದೆ.
8ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.
9ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ಸುರಕ್ಷಿತವಾಗಿ ವಿಶ್ರಮಿಸುವುದು.
10ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ.
11ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.