Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 2

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?
2ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.
3“ಅವರು ಹಾಕಿದ ಬೇಡಿಗಳನ್ನು ಮುರಿದು ಬಂಧಗಳನ್ನು ಹರಿದು ಬೀಸಾಡೋಣ,” ಎನ್ನುತ್ತಾರೆ.
4ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.
5ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು,
6“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”
7ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.
8ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು.
9ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”
10ಆದ್ದರಿಂದ, ರಾಜರುಗಳೇ, ಈಗ ಜ್ಞಾನವಂತರಾಗಿರಿ. ಭೂಲೋಕದ ಅಧಿಕಾರಿಗಳೇ, ಎಚ್ಚರಿಕೆಯಿಂದಿರಿ.
11ಭಯಭಕ್ತಿಯಿಂದ ಯೆಹೋವ ದೇವರ ಸೇವೆಮಾಡಿರಿ, ನಡುಗುತ್ತಾ ಅವರ ಆಳ್ವಿಕೆಯಲ್ಲಿ ಉಲ್ಲಾಸಪಡಿರಿ.
12ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.