Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 25

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರೇ, ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ.
2ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ; ನಾನು ನಾಚಿಕೆಪಡದಂತೆ ಮಾಡಿರಿ; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
3ನಿಮ್ಮನ್ನು ನಿರೀಕ್ಷಿಸುವವರಲ್ಲಿ ಯಾರೂ ನಾಚಿಕೆಪಡದಿರಲಿ; ನಿಷ್ಕಾರಣವಾಗಿ ವಂಚನೆ ಮಾಡುವವರು ನಾಚಿಕೆಪಡಲಿ.
4ಯೆಹೋವ ದೇವರೇ, ನಿಮ್ಮ ಮಾರ್ಗಗಳನ್ನು ನನಗೆ ತೋರಿಸಿರಿ; ನಿಮ್ಮ ದಾರಿಗಳನ್ನು ನನಗೆ ಕಲಿಸಿರಿ.
5ನಿಮ್ಮ ಸತ್ಯದಲ್ಲಿ ಮಾರ್ಗದರ್ಶನ ನೀಡಿ ನನಗೆ ಬೋಧಿಸಿರಿ; ಏಕೆಂದರೆ ನೀವು ನನ್ನ ರಕ್ಷಕ ಆಗಿರುವ ದೇವರಾಗಿದ್ದೀರಿ; ನಿಮ್ಮನ್ನು ನಾನು ದಿನವೆಲ್ಲಾ ನಿರೀಕ್ಷಿಸುತ್ತಿದ್ದೇನೆ.
6ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ, ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ.
7ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.
8ಯೆಹೋವ ದೇವರು ಒಳ್ಳೆಯವರೂ ನ್ಯಾಯವುಳ್ಳವರೂ ಆಗಿದ್ದಾರೆ; ಆದ್ದರಿಂದ ಅವರು ಪಾಪಿಗಳಿಗೆ ತಮ್ಮ ಮಾರ್ಗಗಳನ್ನು ಬೋಧಿಸುತ್ತಾರೆ.
9ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ, ದೀನರಿಗೆ ತಮ್ಮ ಮಾರ್ಗವನ್ನು ಬೋಧಿಸುತ್ತಾರೆ.
10ಯೆಹೋವ ದೇವರ ಒಡಂಬಡಿಕೆಯನ್ನು ಕೈಗೊಳ್ಳುವವರಿಗೆ ಅವರ ದಾರಿಯೆಲ್ಲವು ಪ್ರೀತಿ, ಸತ್ಯದಿಂದ ತುಂಬಿರುತ್ತವೆ.
11ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ ನನ್ನನ್ನು ಮನ್ನಿಸಿರಿ.
12ಯಾವನು ಯೆಹೋವ ದೇವರಿಗೆ ಭಯಪಡುವನೋ, ಅಂಥವನಿಗೆ ಅವರು ಆಯ್ದುಕೊಳ್ಳತಕ್ಕ ಮಾರ್ಗವನ್ನು ಬೋಧಿಸುವರು.
13ಅಂಥವರು ಜೀವಮಾನವೆಲ್ಲಾ ಸಫಲರಾಗಿರುವರು. ಅಂಥವರ ಸಂತಾನವು ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದು.
14ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.
15ನನ್ನ ಕಣ್ಣುಗಳು ಯಾವಾಗಲೂ ಯೆಹೋವ ದೇವರ ಕಡೆಗೆ ಇರುತ್ತವೆ; ಏಕೆಂದರೆ ಅವರೇ ನನ್ನ ಪಾದಗಳನ್ನು ಬಲೆಯಿಂದ ಬಿಡಿಸುವವರು.
16ನೀವು ನನ್ನ ಕಡೆಗೆ ತಿರುಗಿ ನನ್ನನ್ನು ಕರುಣಿಸಿರಿ; ನಾನು ಒಬ್ಬಂಟಿಗನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
17ನನ್ನ ಹೃದಯದ ಕಷ್ಟಗಳನ್ನು ಪರಿಹರಿಸಿರಿ; ನೀವು ನನ್ನ ಸಂಕಟಗಳಿಂದ ನನ್ನನ್ನು ಬಿಡಿಸಿರಿ.
18ನನ್ನ ಬಾಧೆಯನ್ನೂ ವ್ಯಥೆಯನ್ನೂ ನೋಡಿರಿ; ನನ್ನ ಪಾಪಗಳನ್ನೆಲ್ಲಾ ತೆಗೆದುಹಾಕಿರಿ.
19ನನ್ನ ಶತ್ರುಗಳನ್ನು ನೋಡಿರಿ, ಅವರು ಹೆಚ್ಚಾಗಿದ್ದಾರೆ; ತೀವ್ರ ಹಗೆಯಿಂದ ಅವರು ನನ್ನನ್ನು ದ್ವೇಷಿಸುತ್ತಾರೆ.
20ನನ್ನ ಪ್ರಾಣವನ್ನು ಕಾಪಾಡಿ, ನನ್ನನ್ನು ಬಿಡಿಸಿರಿ; ನಾನು ನಾಚಿಕೆಪಡದಂತೆ ಮಾಡಿರಿ, ಏಕೆಂದರೆ ನಾನು ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ.
21ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.
22ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ವಿಮೋಚಿಸಿರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.