Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 28

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.
2ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.
3ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.
4ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.
5ಅವರು ಯೆಹೋವ ದೇವರ ಕೃತ್ಯಗಳನ್ನೂ, ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ; ಆದ್ದರಿಂದ ದೇವರು ಅವರನ್ನು ವೃದ್ಧಿಗೊಳಿಸದೆ ದಂಡಿಸುವರು.
6ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಕರುಣೆಗಾಗಿ ನನ್ನ ಮೊರೆಯನ್ನು ಅವರು ಕೇಳಿದ್ದಾರೆ.
7ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.
8ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.
9ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.