Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 33

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ನೀತಿವಂತರೇ, ಯೆಹೋವ ದೇವರಿಗಾಗಿ ಸಂತೋಷದಿಂದ ಹಾಡಿರಿ; ಯಥಾರ್ಥರು ಅವರನ್ನು ಕೊಂಡಾಡುವುದು ಯೋಗ್ಯವಾಗಿದೆ.
2ಯೆಹೋವ ದೇವರನ್ನು ಕಿನ್ನರಿಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಅವರನ್ನು ಕೀರ್ತಿಸಿರಿ.
3ದೇವರಿಗೆ ಹೊಸಹಾಡನ್ನು ಹಾಡಿರಿ. ದೊಡ್ಡ ಶಬ್ದದಿಂದ ಇಂಪಾಗಿ ಹಾಡಿರಿ.
4ಏಕೆಂದರೆ ಯೆಹೋವ ದೇವರ ವಾಕ್ಯವು ಯಥಾರ್ಥವೂ ಸತ್ಯವೂ ಆಗಿರುತ್ತವೆ. ಅವರ ಮಾಡುವ ಎಲ್ಲಾ ಕೆಲಸಗಳಲ್ಲಿಯೂ ನಂಬಿಗಸ್ತರಾಗಿರುತ್ತಾರೆ.
5ಅವರು ನೀತಿಯನ್ನೂ, ನ್ಯಾಯವನ್ನೂ ಪ್ರೀತಿಸುತ್ತಾರೆ; ಭೂಲೋಕವೆಲ್ಲಾ ಯೆಹೋವ ದೇವರ ಒಡಂಬಡಿಕೆಯ ಪ್ರೀತಿಯಿಂದ ತುಂಬಿದೆ.
6ಯೆಹೋವ ದೇವರ ವಾಕ್ಯದಿಂದ ಆಕಾಶವೂ, ಅವರ ಬಾಯಿಯ ಉಸಿರಿನಿಂದ ನಕ್ಷತ್ರ ಮಂಡಲವೂ ಉಂಟಾದವು.
7ಅವರು ಸಮುದ್ರದ ನೀರನ್ನು ಒಟ್ಟುಗೂಡಿಸುತ್ತಾರೆ; ಅವರು ಅಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾರೆ.
8ಭೂಲೋಕವೆಲ್ಲಾ ಯೆಹೋವ ದೇವರಿಗೆ ಭಯಪಡಲಿ; ಭೂಲೋಕ ನಿವಾಸಿಗಳೆಲ್ಲರೂ ಅವರಿಗೆ ಭಯಭಕ್ತಿಯಿಂದಿರಲಿ.
9ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.
10ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.
11ಆದರೆ ಯೆಹೋವ ದೇವರ ಆಲೋಚನೆಗಳು ಎಂದೆಂದಿಗೂ ಅವರ ಹೃದಯದ ಉದ್ದೇಶಗಳು ತಲತಲಾಂತರಕ್ಕೂ ನಿಲ್ಲುತ್ತವೆ.
12ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.
13ಪರಲೋಕದಿಂದ ಯೆಹೋವ ದೇವರು ದೃಷ್ಟಿಸಿ, ಮಾನವರೆಲ್ಲರನ್ನೂ ನೋಡುತ್ತಾರೆ.
14ತಮ್ಮ ನಿವಾಸ ಸ್ಥಳದಿಂದ ಭೂನಿವಾಸಿಗಳೆಲ್ಲರ ಮೇಲೆ ಕಣ್ಣಿಡುತ್ತಾರೆ.
15ಎಲ್ಲರ ಹೃದಯಗಳನ್ನು ರೂಪಿಸುವವರು ದೇವರೇ, ಜನರು ಮಾಡುವ ಕೆಲಸಗಳನ್ನೆಲ್ಲಾ ಗಮನಿಸುವವರೂ ಅವರೇ.
16ಅಧಿಕ ಸೈನ್ಯದಿಂದ ಅರಸನು ಜಯಹೊಂದುವುದಿಲ್ಲ; ಪರಾಕ್ರಮಶಾಲಿಯು ಅಧಿಕ ಶಕ್ತಿಯಿಂದ ಬಿಡುಗಡೆಯಾಗುವುದಿಲ್ಲ.
17ಬಿಡುಗಡೆಗೆ ಕುದುರೆಯ ಬಲ ವ್ಯರ್ಥವಾಗಿದೆ; ಅದಕ್ಕೆ ಮಹಾಶಕ್ತಿ ಇದ್ದರೂ ಅದು ರಕ್ಷಿಸಲಾರದು.
18ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.
19ಇದರಿಂದ ದೇವರು ಅವರ ಪ್ರಾಣವನ್ನು ಮರಣದಿಂದ ಬಿಡಿಸಿ, ಬರಗಾಲದಲ್ಲಿ ಅವರ ಜೀವವನ್ನು ಕಾಪಾಡುತ್ತಾರೆ.
20ನಮ್ಮ ಪ್ರಾಣವು ಯೆಹೋವ ದೇವರಿಗಾಗಿ ಕಾದಿದೆ; ನಮ್ಮ ಸಹಾಯವೂ ನಮ್ಮ ಗುರಾಣಿಯೂ ಅವರೇ.
21ದೇವರಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಅವರ ಪರಿಶುದ್ಧ ಹೆಸರಿನಲ್ಲಿ ಭರವಸೆ ಇಟ್ಟಿದ್ದೇವೆ.
22ನಾವು ನಿಮ್ಮನ್ನು ನಿರೀಕ್ಷಿಸುವ ಪ್ರಕಾರ, ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನಮ್ಮ ಮೇಲೆ ಇರಲಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.