Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 46

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.
2ಆದ್ದರಿಂದ ಭೂಮಿಯು ಕಂಪಿಸಿದರೂ ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,
3ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ, ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು.
4ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
5ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು; ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು.
6ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.
7ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.
8ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ. ಅವರು ಭೂಮಿಯಲ್ಲಿ ಎಂಥಾ ಅತಿಶಯಗಳನ್ನು ಉಂಟುಮಾಡಿದ್ದಾರೆ.
9ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.
10“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
11ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.