Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 49

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳೇ,
2ಸಾಮಾನ್ಯರೇ, ಉನ್ನತರೇ, ಐಶ್ವರ್ಯವಂತರೇ, ಬಡವರೇ ಎಲ್ಲರೂ ಕಿವಿಗೊಡಿರಿ.
3ನನ್ನ ಬಾಯಿ ಜ್ಞಾನವನ್ನು ನುಡಿಯುವುದು, ನನ್ನ ಹೃದಯದ ಧ್ಯಾನವು ವಿವೇಕವಾಗಿರುವುದು.
4ಸಾಮ್ಯಕ್ಕೆ ನನ್ನ ಕಿವಿಗೊಟ್ಟು ಒಗಟನ್ನು ಕಿನ್ನರಿಯಿಂದ ಬಿಚ್ಚುವೆನು.
5ಕೇಡಿನ ದಿವಸಗಳಲ್ಲಿ ನನಗೆ ಒಳಸಂಚು ಮಾಡುವವರ ಅಕ್ರಮವು ನನ್ನನ್ನು ಸುತ್ತಿಕೊಳ್ಳುವಾಗ ನಾನು ಏಕೆ ಭಯಪಡಬೇಕು?
6ಅವರು ತಮ್ಮ ಸಂಪತ್ತಿನಲ್ಲಿ ಭರವಸೆಯಿಟ್ಟು, ತಮ್ಮ ಅಧಿಕ ಐಶ್ವರ್ಯಗಳಲ್ಲಿ ಜಂಭಪಡುವರು.
7ಯಾರೂ ಇನ್ನೊಬ್ಬರ ಜೀವವನ್ನು ವಿಮೋಚಿಸಲಾರರು; ಅಥವಾ ಇತರರಿಗಾಗಿ ಯಾರೂ ದೇವರಿಗೆ ಈಡು ಕೊಡಲಾರರು.
8ಆತ್ಮದ ವಿಮೋಚನೆಯು ಬಹು ಬೆಲೆಯುಳ್ಳದ್ದು, ಅದಕ್ಕೆ ಸಾಕಷ್ಟು ಬೆಲೆಯನ್ನು ಕಟ್ಟಲು ಯಾರಿಗೂ ಸಾಧ್ಯವಿಲ್ಲ.
9ಮನುಷ್ಯರು ಮರಣ ನಾಶವನ್ನು ಕಾಣದೆ, ಶಾಶ್ವತವಾಗಿ ಬದುಕುವಂತೆ ಮಾಡಲು ಯಾರಿಗೂ ಸಾಧ್ಯವಿಲ್ಲ.
10ಏಕೆಂದರೆ, ಜ್ಞಾನಿಗಳು ಸಾಯುವುದನ್ನು ಕಾಣುತ್ತೇವೆ. ಹಾಗೆಯೇ ಮೂರ್ಖರೂ ಜ್ಞಾನಹೀನರೂ ಸಹ ನಾಶವಾಗುತ್ತಾರೆ. ಅವರ ಆಸ್ತಿಯನ್ನು ಇತರರು ಪಡೆಯುತ್ತಾರೆ.
11ಜಮೀನುಗಳಿಗೆ ತಮ್ಮ ಹೆಸರುಗಳನ್ನು ಇಟ್ಟುಕೊಳ್ಳುತ್ತಾರೆ. ಆದರೂ ಸಮಾಧಿಯೇ ಅವರಿಗೆ ಶಾಶ್ವತಮಂದಿರವು. ಅದೇ ಅವರ ತಲತಲಾಂತರಕ್ಕೂ ನಿವಾಸಸ್ಥಾನ.
12ಮನುಷ್ಯನು ಎಷ್ಟು ಆಸ್ತಿ ಗೌರವ ಸಂಪಾದಿಸಿದ್ದರೂ, ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.
13ತಮ್ಮಲ್ಲಿಯೇ ಭರವಸೆ ಇಟ್ಟುಕೊಳ್ಳುವವರಿಗೂ ಇದೇ ಗತಿ. ಅಂಥವರ ಮಾತುಗಳನ್ನು ಒಪ್ಪಿ ಅನುಸರಿಸುವವರ ಗತಿಯೂ ಇದೆ.
14ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.
15ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು. ದೇವರು ನನ್ನನ್ನು ತಮಗಾಗಿ ಅಂಗೀಕರಿಸುವರು.
16ಒಬ್ಬನು ಐಶ್ವರ್ಯವಂತನಾದರೆ ಮತ್ತು ಅವನ ಮನೆಯ ಘನತೆ ದೊಡ್ಡದಾದರೆ ಕಳವಳ ಪಡಬೇಡ.
17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗಲಾರನಷ್ಟೆ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.
18ಸಿರಿ ಬಂದಾಗ ಜನರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನಸ್ತುತಿಯಿಂದಲೂ ಕೂಡಿದವನಾದರೂ
19ಅವನು ತನ್ನ ಪೂರ್ವಿಕರ ಬಳಿಗೆ ಹೋಗುವನು; ಅವರು ಸದಾಕಾಲಕ್ಕೂ ಜೀವ ಬೆಳಕನ್ನು ಕಾಣುವುದಿಲ್ಲ.
20ಮನುಷ್ಯನು ಎಷ್ಟು ಘನತೆಯಲ್ಲಿದ್ದು ವಿವೇಕವಿಲ್ಲದವರಾದರೆ ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.