Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 5

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ, ನನ್ನ ಪ್ರಲಾಪವನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
2ನನ್ನ ಅರಸರೇ, ನನ್ನ ದೇವರೇ, ಸಹಾಯಕ್ಕಾಗಿರುವ ನನ್ನ ಮೊರೆಯನ್ನು ಕೇಳಿರಿ, ನಿಮಗೇ ನಾನು ಪ್ರಾರ್ಥಿಸುತ್ತೇನೆ.
3ಯೆಹೋವ ದೇವರೇ, ಉದಯಕಾಲದಲ್ಲಿ ನನ್ನ ಸ್ವರವನ್ನು ಕೇಳಿರಿ; ಮುಂಜಾನೆಯಲ್ಲಿ ನಾನು ನನ್ನ ಬೇಡಿಕೆಗಳನ್ನು ನಿಮ್ಮ ಮುಂದೆ ಸಮರ್ಪಿಸಿ, ಎದುರುನೋಡುತ್ತಾ ಕಾದುಕೊಂಡಿರುವೆನು.
4ನೀವು ದುಷ್ಟತನವನ್ನು ಮೆಚ್ಚುವ ದೇವರಲ್ಲ; ಕೆಡುಕರು ನಿಮ್ಮ ಬಳಿಯಲ್ಲಿ ವಾಸಿಸುವುದಿಲ್ಲ.
5ನಿಮ್ಮ ಸನ್ನಿಧಿಯಲ್ಲಿ ಗರ್ವಿಗಳು ನಿಂತುಕೊಳ್ಳಲಾರರು. ಅಧರ್ಮ ಮಾಡುವವರೆಲ್ಲರನ್ನು ನೀವು ದ್ವೇಷಿಸುತ್ತೀರಿ.
6ಸುಳ್ಳಾಡುವವರನ್ನು ನೀವು ದಂಡಿಸುತ್ತೀರಿ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವ ದೇವರು ಅಸಹ್ಯಪಡುತ್ತಾರೆ.
7ನಾನಾದರೋ, ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಿಮ್ಮ ಮನೆಗೆ ಬರುವೆನು; ಭಕ್ತಿಭಾವದಿಂದ ನಿಮ್ಮ ಪರಿಶುದ್ಧ ಆಲಯದ ಕಡೆಗೆ ತಲೆಬಾಗುವೆನು.
8ಯೆಹೋವ ದೇವರೇ, ನನ್ನ ವಿರೋಧಿಗಳ ನಿಮಿತ್ತ ನಿಮ್ಮ ನೀತಿಯಲ್ಲಿ ನನ್ನನ್ನು ನಡೆಸಿರಿ; ನಿಮ್ಮ ಮಾರ್ಗವನ್ನು ನನ್ನ ಮುಂದೆ ನೇರವಾಗಿ ಮಾಡಿರಿ.
9ಅವರ ಬಾಯಿಯಲ್ಲಿ ಯಥಾರ್ಥ ಮಾತು ಒಂದೂ ಇಲ್ಲ; ಅವರ ಹೃದಯವು ನಾಶನದಿಂದ ತುಂಬಿದೆ. ಅವರ ಗಂಟಲು ತೆರೆದ ಸಮಾಧಿಯೇ; ತಮ್ಮ ನಾಲಿಗೆಯಿಂದ ಮುಖಸ್ತುತಿ ಮಾಡುತ್ತಾರೆ.
10ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.
11ಆದರೆ ನಿಮ್ಮನ್ನು ಆಶ್ರಯಿಸುವವರೆಲ್ಲರು ಆನಂದಿಸಲಿ; ಅವರು ಸದಾ ನಿಮ್ಮ ಆನಂದ ಗಾನವನ್ನು ಹಾಡಲಿ. ನಿಮ್ಮ ಹೆಸರನ್ನು ಪ್ರೀತಿಸುವವರು ನಿಮ್ಮಲ್ಲಿ ಆನಂದಿಸುವಂತೆ ಅವರನ್ನು ನಿಮ್ಮ ಸಂರಕ್ಷಣೆಯಿಂದ ಆವರಿಸಿಕೊಳ್ಳಿರಿ.
12ಯೆಹೋವ ದೇವರೇ, ನೀವು ನೀತಿವಂತರನ್ನು ನಿಶ್ಚಯವಾಗಿ ಆಶೀರ್ವದಿಸಿದ್ದೀರಿ; ನೀವು ಅವರನ್ನು ನಿಮ್ಮ ಮೆಚ್ಚುಗೆಯಿಂದ ಗುರಾಣಿಯಂತೆಯೇ ಆವರಿಸಿಕೊಳ್ಳಿರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.