Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 50

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.
2ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ ದೇವರು ಪ್ರಕಾಶಿಸುತ್ತಿದ್ದಾರೆ.
3ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.
4ತಮ್ಮ ಜನರಿಗೆ ನ್ಯಾಯತೀರಿಸುವುದಕ್ಕೆ ಭೂಮಿ ಆಕಾಶಗಳನ್ನೂ ಹೀಗೆಂದು ಕರೆಯುತ್ತಿದ್ದಾರೆ:
5“ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.”
6ಮತ್ತು ದೇವರು ನ್ಯಾಯಾಧಿಪತಿಯಾಗಿದ್ದಾರೆ. ಆಕಾಶಗಳು ದೇವರ ನೀತಿಯನ್ನು ಪ್ರಕಟಿಸುತ್ತವೆ.
7“ನನ್ನ ಜನರೇ, ಕೇಳಿರಿ, ನಾನು ಮಾತನಾಡುತ್ತಿದ್ದೇನೆ, ಇಸ್ರಾಯೇಲೇ, ನಿಮಗೆ ವಿರೋಧವಾಗಿ ಹೀಗೆಂದು ನಾನು ಸಾಕ್ಷಿ ಕೊಡುವೆನು: ನಾನು ದೇವರು, ಹೌದು ನಿಮ್ಮ ದೇವರು ನಾನೇ.
8ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ, ಅಥವಾ ನನ್ನ ಮುಂದೆ ಯಾವಾಗಲೂ ಇರುವ ದಹನಬಲಿಗಳ ವಿರೋಧವಾಗಿಯೂ ನಾನು ತಪ್ಪು ಹೊರಿಸುತ್ತಾಯಿಲ್ಲ.
9ನಿಮ್ಮ ಮನೆಯಿಂದ ಹೋರಿಯಾಗಲಿ ಕೊಟ್ಟಿಗೆಯಿಂದ ಹೋತಗಳಾಗಲಿ ನನಗೆ ಅವಶ್ಯವಿಲ್ಲ.
10ಏಕೆಂದರೆ ಅಡವಿಯ ಮೃಗಗಳೆಲ್ಲವೂ ನನ್ನವೇ. ಸಾವಿರ ಬೆಟ್ಟಗಳಲ್ಲಿರುವ ಪಶುಗಳೂ ಸಹ ನನ್ನವೇ.
11ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಬಯಲಿನ ಮೃಗಗಳು ನನ್ನವುಗಳಾಗಿವೆ.
12ನನಗೆ ಹಸಿವಾದರೆ ನಿಮಗೆ ಹೇಳಬೇಕಾಗಿಲ್ಲ, ಏಕೆಂದರೆ ಭೂಲೋಕವೂ ಅದರಲ್ಲಿರುವುದೆಲ್ಲವೂ ನನ್ನವೇ.
13ಹೋರಿಗಳ ಮಾಂಸವನ್ನು ನಾನು ಭುಜಿಸುವುದಿಲ್ಲ. ಹೋತಗಳ ರಕ್ತವನ್ನು ನಾನು ಕುಡಿಯುವುದಿಲ್ಲ.
14“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.
15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”
16ಆದರೆ ದುಷ್ಟನಿಗೆ ದೇವರು ಹೇಳುವುದೇನೆಂದರೆ: “ನನ್ನ ನಿಯಮಗಳನ್ನು ಪಠಿಸುವುದಕ್ಕೆ ಹಕ್ಕು ನಿಮಗೆ ಏನಿದೆ? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಛರಿಸುವುದೇಕೆ?
17ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು ನಿಮ್ಮ ಹಿಂದೆ ಬಿಸಾಡಿಬಿಟ್ಟೀರಲ್ಲಾ.
18ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ. ವ್ಯಭಿಚಾರಿಗಳ ಸಂಗಡ ನಿಮಗೆ ಪಾಲು ಇದೆ.
19ನೀವು ನಿಮ್ಮ ಬಾಯನ್ನು ಕೇಡಿಗೆ ಉಪಯೋಗಿಸುತ್ತೀರಿ. ನಿಮ್ಮ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
20ನೀವು ಕುಳಿತುಕೊಂಡು ನಿಮ್ಮ ಸಹೋದರರಿಗೆ ವಿರೋಧವಾಗಿ ಸುಳ್ಳಾಡುತ್ತೀರಿ. ನಿಮ್ಮ ಒಡಹುಟ್ಟಿದವರ ಮೇಲೆ ಚಾಡಿ ಹೇಳುತ್ತೀರಿ.
21ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.
22“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.
23ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.