Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 56

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ದೇವರೇ ಕರುಣಿಸು, ಏಕೆಂದರೆ ಮನುಷ್ಯರು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ದಿನವೆಲ್ಲಾ ವಿರೋಧಿಸುತ್ತಾ ನನ್ನನ್ನು ಬಾಧಿಸುತ್ತಿದ್ದಾರೆ.
2ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಗರ್ವದಿಂದ ನನಗೆ ವಿರೋಧವಾಗಿ ಯುದ್ಧ ಮಾಡುತ್ತಿದ್ದಾರೆ.
3ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
4ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು. ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ. ಸಾಯುವ ಮನುಷ್ಯನು ನನಗೇನು ಮಾಡಬಲ್ಲ?
5ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ಕೇಡಿಗಾಗಿವೆ.
6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ. ನನ್ನ ಪ್ರಾಣ ತೆಗೆಯಲು ಕುತೂಹಲದಿಂದ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
7ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ದೇವರೇ ಜನರನ್ನು ಕಠಿಣವಾಗಿ ದಂಡಿಸಿರಿ.
8ನನ್ನ ಗೋಳಾಟವನ್ನು ಎಣಿಕೆ ಮಾಡಿರಿ, ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ, ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ?
9ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.
10ನಾನು ದೇವರಲ್ಲಿಯೂ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು. ಹೌದು, ದೇವರಲ್ಲಿಯೂ ಯೆಹೋವ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು.
11ನಾನು ದೇವರಲ್ಲಿ ಭರವಸೆಯಿಡುವೆನು. ನಾನು ಭಯಪಡುವುದಿಲ್ಲ. ಮಾನವನು ನನಗೇನು ಮಾಡುವನು?
12ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ. ನಾನು ಉಪಕಾರ ಸ್ತುತಿಯ ಕಾಣಿಕೆಗಳನ್ನು ನಿಮಗೆ ಸಲ್ಲಿಸುವೆನು.
13ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.