Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 57

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
2ಮಹೋನ್ನತನಾದ ದೇವರಿಗೆ, ಮೊರೆಯಿಡುತ್ತೇನೆ. ನನಗಾಗಿ ಕಾರ್ಯಗಳಿಗೆ ನ್ಯಾಯ ನೀಡುವ ದೇವರಿಗೆ ಮೊರೆಯಿಡುತ್ತೇನೆ.
3ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.
4ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ. ಕ್ರೂರಮೃಗಗಳಂಥವರ ಮಧ್ಯದಲ್ಲಿ ಒತ್ತಾಯವಾಗಿ ವಾಸಮಾಡುತ್ತಿದ್ದೇನೆ. ಅವರ ಹಲ್ಲು, ಭಲ್ಲೆ, ಬಾಣಗಳೂ ಅವರ ನಾಲಿಗೆ ಹದವಾದ ಖಡ್ಗವೂ ಆಗಿವೆ.
5ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.
6ಶತ್ರುಗಳು ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದಿದ್ದಾರೆ. ಅದರಲ್ಲಿ ತಾವೇ ಬಿದ್ದುಹೋದರು.
7ದೇವರೇ, ನನ್ನ ಹೃದಯವು ಸ್ಥಿರವಾಗಿದೆ. ಹೌದು, ನನ್ನ ಹೃದಯವು ಸ್ಥಿರವಾಗಿದೆ. ನಾನು ಸಂಗೀತದೊಡನೆ ಹಾಡುವೆನು.
8ಎಚ್ಚರವಾಗು, ನನ್ನ ಪ್ರಾಣವೇ, ವೀಣೆಯೇ, ಕಿನ್ನರಿಯೇ ಎಚ್ಚರವಾಗಿರಿ, ನಾನು ಉದಯಕಾಲವನ್ನು ಎಚ್ಚರಗೊಳಿಸುವೆನು.
9ಯೆಹೋವ ದೇವರೇ, ಜನಾಂಗಗಳಲ್ಲಿ ನಾನು ನಿಮ್ಮನ್ನು ಕೊಂಡಾಡುವೆನು. ಜನರ ಮಧ್ಯದಲ್ಲಿ ನಿಮ್ಮನ್ನು ಹಾಡಿ ಕೊಂಡಾಡುವೆನು.
10ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.
11ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.