Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 65

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ದೇವರೇ, ಚೀಯೋನಿನಲ್ಲಿ ನಿಮಗೋಸ್ಕರ ಸ್ತೋತ್ರವು ಕಾದಿದೆ. ನಿಮಗೆ ನಮ್ಮ ಹರಕೆಗಳನ್ನು ಪೂರೈಸುವೆವು.
2ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.
3ನಾವು ನಮ್ಮ ಪಾಪಗಳಿಂದ ತುಂಬಿಹೋಗಿರುವಾಗ ನೀವೇ ನಮ್ಮ ದ್ರೋಹಗಳಿಗಾಗಿ ದೋಷಪರಿಹಾರಕರು.
4ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು. ಏಕೆಂದರೆ ನಿಮ್ಮ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿಮ್ಮ ಪರಿಶುದ್ಧ ಮಂದಿರವಾದ ನಿಮ್ಮ ಆಲಯದ ಒಳ್ಳೆಯ ಸಂಗತಿಗಳಿಂದ ನಮಗೆ ತೃಪ್ತಿಯಾಗಲಿ.
5ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.
6ಬೆಟ್ಟಗಳನ್ನು ನಿಮ್ಮ ಶಕ್ತಿಯಿಂದ ರೂಪಿಸಿದವರು ನೀವೇ. ಜಲದಿಂದ ನಡು ಕಟ್ಟಿಕೊಂಡಿರುವವರೂ ನೀವೇ.
7ಸಮುದ್ರಗಳ ಘೋಷವನ್ನೂ, ಅವುಗಳ ತೆರೆಗಳ ಘೋಷವನ್ನೂ, ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ.
8ಇಡೀ ಭೂಮಿಯಲ್ಲಿರುವವರು ನಿಮ್ಮ ಅದ್ಭುತಕಾರ್ಯಗಳಿಗೆ ಅತಿಶಯಗೊಂಡಿದ್ದಾರೆ. ಉದಯಾಸ್ತಮಾನಗಳಲ್ಲಿ ಇರುವವರನ್ನು ಉತ್ಸಾಹ ಧ್ವನಿಗೈಯುವಂತೆ ಮಾಡುತ್ತೀರಿ.
9ಭೂಮಿಯನ್ನು ಸಂಧಿಸಿ, ಅದಕ್ಕೆ ಮಳೆಬರುವಂತೆ, ಅದನ್ನು ಫಲವತ್ತಾಗಿ ಮಾಡುತ್ತೀರಿ. ದೇವರ ನದಿಯು ನೀರಿನಿಂದ ತುಂಬಿದೆ. ಹೀಗೆ ಭೂಮಿಯನ್ನು ಸಿದ್ಧಮಾಡಿ, ಜನರಿಗೆ ನೀವು ಧಾನ್ಯವನ್ನು ಒದಗಿಸುತ್ತೀರಿ.
10ನೇಗಿಲ ಸಾಲುಗಳನ್ನು ಸಮಮಾಡುತ್ತೀರಿ. ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀರಿ, ಅದರ ಮೊಳಕೆಯನ್ನು ಆಶೀರ್ವದಿಸುತ್ತೀರಿ.
11ವರ್ಷಕ್ಕೆ ನಿಮ್ಮ ಉದಾರತೆಯ ಕಿರೀಟವನ್ನು ಇಡುತ್ತೀರಿ. ನಿಮ್ಮ ಹಾದಿಗಳು ಸಮೃದ್ಧಿಯಿಂದ ತುಂಬಿ ಪ್ರವಾಹಿಸುತ್ತಿದೆ.
12ಮರುಭೂಮಿಯ ಹುಲ್ಲುಗಾವಲಲ್ಲಿ ವೃಷ್ಟಿಯಾಗಿದೆ. ಗುಡ್ಡಗಳು ಉಲ್ಲಾಸವನ್ನು ಧರಿಸಿಕೊಂಡಿವೆ.
13ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ. ಕಣಿವೆಗಳು ಸಹ ಧಾನ್ಯದಿಂದ ಮುಚ್ಚಿರುತ್ತವೆ. ಅವು ಉತ್ಸಾಹಗೊಂಡು ಹಾಡುತ್ತವೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.