Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 72

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.
2ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.
3ಬೆಟ್ಟಗುಡ್ಡಗಳಿಂದ ಸಮೃದ್ಧಿಯೂ ನೀತಿಯ ಫಲವೂ ಜನರಿಗೆ ಬರಲಿ.
4ಅರಸನು ಬಡವರ ನ್ಯಾಯ ಸ್ಥಾಪಿಸಲಿ. ಅವನು ಅಗತ್ಯತೆಯಲ್ಲಿರುವವರ ಮಕ್ಕಳನ್ನು ರಕ್ಷಿಸಲಿ. ದಬ್ಬಾಳಿಕೆ ಮಾಡುವವರನ್ನು ದಂಡಿಸಲಿ.
5ಸೂರ್ಯನೂ ಚಂದ್ರನೂ ಇರುವವರೆಗೆ ತಲತಲಾಂತರಗಳು ಜನರು ಅರಸನಿಗೆ ಭಯಪಡಲಿ.
6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ, ಭೂಮಿಯನ್ನು ನೆನಸುತ್ತಾ ಸುರಿಯುವ ಮಳೆಗಳ ಹಾಗೆಯೂ ಅರಸನು ಇರಲಿ.
7ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ.
8ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.
9ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ. ಅರಸನ ಶತ್ರುಗಳು ಧೂಳನ್ನು ನೆಕ್ಕಲಿ.
10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.
11ಹೌದು, ಎಲ್ಲಾ ಅರಸರು ನಮ್ಮ ಅರಸನ ಮುಂದೆ ಅಡ್ಡಬೀಳಲಿ. ಎಲ್ಲಾ ಜನಾಂಗಗಳು ಅರಸನಿಗೆ ಸೇವೆಸಲ್ಲಿಸಲಿ.
12ಏಕೆಂದರೆ ಅರಸನಿಗೆ ಮೊರೆಯಿಡುವ ಬಡವರನ್ನೂ ಸಹಾಯಕನಿಲ್ಲದ ಬಾಧೆಪಡುವವರನ್ನೂ ಬಿಡಿಸುವನು.
13ದರಿದ್ರನನ್ನೂ, ಬಡವನನ್ನೂ ಕರುಣಿಸುವನು. ಬಡವರ ಪ್ರಾಣಗಳನ್ನು ರಕ್ಷಿಸುವನು.
14ಮೋಸ ದಬ್ಬಾಳಿಕೆಯಿಂದ ಜನರನ್ನು ಬಿಡುಗಡೆ ಮಾಡುವನು. ಜನರ ಜೀವವು ಆತನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
15ಅರಸನು ಬಾಳಲಿ. ಆತನಿಗೆ ಶೆಬದ ಚಿನ್ನವನ್ನು ಕೊಡಲಿ. ಆತನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡಲಿ. ಇಡೀ ದಿನ ಆತನಿಗೆ ಆಶೀರ್ವಾದಗಳು ಉಂಟಾಗಲಿ.
16ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯವರೆಗೂ ಇರಲಿ; ಅದರ ಫಲವು ಲೆಬನೋನಿನ ಹಾಗೆ ಸಮೃದ್ಧಿಯಾಗಲಿ; ಪಟ್ಟಣದವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿ ಆಗಲಿ.
17ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.
18ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ.
19ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.
20ಇಷಯನ ಮಗ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯವಾಗುತ್ತವೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.