Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 80

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.
2ಎಫ್ರಾಯೀಮ್, ಬೆನ್ಯಾಮೀನ್, ಮನಸ್ಸೆಯರ ಮುಂದೆ ನಿಮ್ಮ ಪರಾಕ್ರಮವನ್ನು ತೋರಿಸಲು ಬಂದು ನಮ್ಮನ್ನು ರಕ್ಷಿಸಿರಿ.
3ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.
4ಸರ್ವಶಕ್ತ ದೇವರಾಗಿರುವ ಯೆಹೋವ ದೇವರೇ, ಎಷ್ಟರವರೆಗೆ ನಿಮ್ಮ ಜನರ ಪ್ರಾರ್ಥನೆಗೆ ವಿರೋಧವಾಗಿ ಬೇಸರಗೊಳ್ಳುವಿರಿ?
5ರೋದನವೇ ನಮ್ಮ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಅನುಮತಿಸಿದ್ದೀರಿ.
6ನಮ್ಮ ನೆರೆಯವರ ವಿವಾದಕ್ಕೆ ನಮ್ಮನ್ನು ಗುರಿಮಾಡಿದ್ದೀರಿ. ನಮ್ಮ ಶತ್ರುಗಳು ನಮ್ಮನ್ನು ಅಪಹಾಸ್ಯ ಮಾಡುತ್ತಾರೆ.
7ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.
8ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.
9ಅದಕ್ಕಾಗಿ ಸ್ಥಳ ಸಿದ್ಧಮಾಡಿದಿರಿ. ಆಗ ಅದು ಬೇರೂರಿ ದೇಶವನ್ನು ತುಂಬಿತು.
10ಅದರ ನೆರಳಿನಿಂದ ಬೆಟ್ಟಗಳೂ ಅದರ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲಾದವು.
11ಅದು ತನ್ನ ರೆಂಬೆಗಳನ್ನು ಸಮುದ್ರದವರೆಗೂ, ತನ್ನ ಬಳ್ಳಿಗಳನ್ನು ನದಿಯವರೆಗೂ ಹರಡಿಸಿತು.
12ಮಾರ್ಗದಲ್ಲಿ ಹಾದುಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಏಕೆ ಅದರ ಬೇಲಿಗಳನ್ನು ನೀವು ಮುರಿದುಬಿಟ್ಟಿದ್ದೀರಿ?
13ಅಡವಿಯಿಂದ ಬಂದ ಹಂದಿಗಳು ಅದನ್ನು ಹಾಳು ಮಾಡುತ್ತವೆ; ಕಾಡಿನ ಮೃಗಗಳು ಅದನ್ನು ತಿಂದು ಹಾಕುತ್ತವೆ.
14ಸೇನಾಧೀಶ್ವರ ದೇವರೇ, ನಿಮ್ಮ ದರ್ಶನವಾಗಲಿ. ನೀವು ಪರಲೋಕದಿಂದ ಕಟಾಕ್ಷಿಸಿರಿ. ಈ ದ್ರಾಕ್ಷಾಲತೆಯನ್ನು ಪರಾಮರಿಸಿರಿ.
15ನಿಮ್ಮ ಬಲಗೈ ನೆಟ್ಟ ಸಸಿಯನ್ನೂ ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ ಪರಾಮರಿಸಿರಿ.
16ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು.
17ನಿಮ್ಮ ಬಲಗಡೆಯಲ್ಲಿರುವಾತನ ಮೇಲೆ ನಿಮ್ಮ ಹಸ್ತವಿರಲಿ. ನಿಮಗಾಗಿ ಆ ನರಪುತ್ರನನ್ನು ಎಬ್ಬಿಸಿದ್ದೀರಿ.
18ಆಗ ನಾವು ನಿಮ್ಮಿಂದ ತೊಲಗುವುದಿಲ್ಲ. ನಮ್ಮನ್ನು ಉಜ್ಜೀವಿಸಿರಿ, ಆಗ ನಿಮ್ಮ ಹೆಸರನ್ನು ಕರೆಯುವೆವು.
19ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.