Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 83

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ದೇವರೇ, ಮೌನವಾಗಿರಬೇಡಿರಿ. ನಮ್ಮ ಕೂಗಿಗೆ ನಿಮ್ಮ ಪ್ರತಿಕ್ರಿಯೆ ನೀಡಿರಿ. ದೇವರೇ, ಸುಮ್ಮನಿರಬೇಡಿರಿ.
2ಏಕೆಂದರೆ ಇಗೋ, ನಿಮ್ಮ ಶತ್ರುಗಳು ಘೋಷಿಸುತ್ತಾರೆ. ನಿಮ್ಮ ವೈರಿಗಳು ತಲೆ ಎತ್ತುತ್ತಾರೆ.
3ನಿಮ್ಮ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿ ಕಲ್ಪಿಸುತ್ತಾರೆ. ನೀವು ಅಡಗಿಸಿಟ್ಟವರಿಗೆ ವಿರೋಧವಾಗಿ ಆಲೋಚಿಸಿಕೊಳ್ಳುತ್ತಾರೆ.
4ಅವರು, “ಬನ್ನಿರಿ, ರಾಷ್ಟ್ರವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲರ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ,” ಎನ್ನುತ್ತಾರೆ.
5ಅವರು ಏಕ ಮನಸ್ಕರಾಗಿ ಆಲೋಚನೆ ಮಾಡಿಕೊಂಡಿದ್ದಾರೆ. ನಿಮಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
6ಎದೋಮ್ಯರ ಮತ್ತು ಇಷ್ಮಾಯೇಲ್ಯರ ಪಾಳೆಯದವರು ಮೋವಾಬ್ಯರು, ಹಗ್ರೀಯರು,
7ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಟೈರಿನವರು, ಫಿಲಿಷ್ಟಿಯರು,
8ಅಸ್ಸೀರಿಯರು ಎಲ್ಲರೂ ಅವರಲ್ಲಿ ಕೂಡಿಕೊಂಡಿರುವರು; ಅವರು ಲೋಟನ ಸಂತತಿಯವರಿಗೆ ಸಹಾಯಮಾಡಲು ಸಿದ್ಧರಾಗಿದ್ದಾರೆ.
9ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡಿರಿ.
10ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
11ಅವರನ್ನೂ, ಅವರ ಅಧಿಪತಿಗಳನ್ನೂ, ಓರೇಬ್ ಮತ್ತು ಜೇಬನ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೆಬಹ ಮತ್ತು ಚಲ್ಮುನ್ನರ ಹಾಗೆಯೂ ಮಾಡಿರಿ.
12ಅವರು, “ನಾವು ದೇವರ ಹುಲ್ಲುಗಾವಲು ಪ್ರದೇಶಗಳನ್ನು ಸ್ವಾಧೀನ ಮಾಡಿಕೊಳ್ಳೋಣ,” ಅನ್ನುತ್ತಾರೆ.
13ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ, ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
14ಅಡವಿ ಸುಡುವ ಬೆಂಕಿಯ ಹಾಗೆಯೂ, ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
15ನಿಮ್ಮ ಬಿರುಗಾಳಿಯಿಂದ ಅವರನ್ನು ಹಿಂಸಿಸಿ, ನಿಮ್ಮ ಸುಳಿಗಾಳಿಯಿಂದ ಅವರನ್ನು ತಲ್ಲಣ ಪಡಿಸಿರಿ.
16ಯೆಹೋವ ದೇವರೇ, ನಿಮ್ಮ ನಾಮವನ್ನು ಅವರು ಹುಡುಕುವಂತೆ ಅವರ ಮುಖಗಳನ್ನು ನಾಚಿಕೆಯಿಂದ ತುಂಬಿಸಿರಿ.
17ಅವರು ನಾಚಿಕೆಪಟ್ಟು ಕಳವಳಗೊಳ್ಳಲಿ. ಹೌದು, ಅವರು ಲಜ್ಜೆಪಟ್ಟು ನಾಶವಾಗಲಿ.
18ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.