Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 84

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ!
2ಯೆಹೋವ ದೇವರ ಅಂಗಳಗಳಲ್ಲಿ ಸೇರಲು ನನ್ನ ಪ್ರಾಣವು ಬಯಸಿ ಕುಂದುತ್ತದೆ. ನನ್ನ ಹೃದಯವೂ, ನನ್ನ ಶರೀರವೂ ಜೀವವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
3ಓ ಸೇನಾಧೀಶ್ವರ ಯೆಹೋವ ದೇವರೇ, ನನ್ನ ಅರಸರಾಗಿರುವವರೇ, ನನ್ನ ದೇವರೇ, ಗುಬ್ಬಿಯು ಮನೆಯನ್ನೂ, ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ.
4ನಿಮ್ಮ ಆಲಯದಲ್ಲಿ ವಾಸವಾಗಿರುವವರು ಧನ್ಯರು; ನಿಮ್ಮನ್ನು ಅವರು ಯಾವಾಗಲೂ ಸ್ತುತಿಸುವರು.
5ನಿಮ್ಮಲ್ಲಿ ಯಾರು ಬಲಹೊಂದಿರುವರೋ, ಯಾರು ಯಾತ್ರಿಗಳಾಗಿದ್ದಾರೋ ಅವರು ಧನ್ಯರು.
6ಬಾಕಾ ತಗ್ಗನ್ನು ದಾಟುವಾಗ ಅವರು ಅದನ್ನು ಬುಗ್ಗೆಯಾಗಿ ಮಾಡುತ್ತಾರೆ. ಮುಂಗಾರು ಮಳೆಯು ಕೊಳಗಳನ್ನು ತುಂಬುತ್ತದೆ.
7ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
8ಸರ್ವಶಕ್ತರಾದ ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ಯಾಕೋಬನ ದೇವರೇ, ಕಿವಿಗೊಡಿರಿ.
9ನಮ್ಮ ಗುರಾಣಿಯಾಗಿರುವ ದೇವರೇ, ನೋಡಿರಿ. ನಿಮ್ಮ ಅಭಿಷಿಕ್ತನ ಮುಖವನ್ನು ದೃಷ್ಟಿಸಿ ನೋಡಿರಿ.
10ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.
11ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.
12ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮಲ್ಲಿ ಭರವಸವಿಡುವವನೇ ಭಾಗ್ಯವಂತನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.