Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 96

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ.
2ಯೆಹೋವ ದೇವರಿಗೆ ಹಾಡಿರಿ, ಅವರ ನಾಮವನ್ನು ಸ್ತುತಿಸಿರಿ; ಅವರ ರಕ್ಷಣೆಯನ್ನು ದಿನಂಪ್ರತಿ ಸಾರಿ ಹೇಳಿರಿ.
3ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.
4ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.
5ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು.
6ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ; ಬಲವೂ, ಸೌಂದರ್ಯವೂ ಅವರ ಪರಿಶುದ್ಧ ಸ್ಥಳದಲ್ಲಿ ಇವೆ.
7ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ.
8ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ಅವರ ಅಂಗಳಗಳಿಗೆ ಬನ್ನಿರಿ.
9ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ; ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ.
10“ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.
11ಆಕಾಶವು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.
12ಹೊಲಗಳೂ, ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ.
13ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.