Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 98

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ.
2ಯೆಹೋವ ದೇವರು ತಮ್ಮ ರಕ್ಷಣೆಯನ್ನು ತಿಳಿಯಪಡಿಸಿದ್ದಾರೆ; ರಾಷ್ಟ್ರಗಳಿಗೆ ತಮ್ಮ ನೀತಿಯನ್ನು ಪ್ರಕಟಪಡಿಸಿದ್ದಾರೆ.
3ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
4ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಆನಂದಘೋಷ ಮಾಡಿರಿ. ಉತ್ಸಾಹಧ್ವನಿ ಮಾಡಿ ಸಂಗೀತದಿಂದ ಸ್ತುತಿಹಾಡಿರಿ.
5ಯೆಹೋವ ದೇವರಿಗೆ ಕಿನ್ನರಿಯಿಂದ ಗಾನಮಾಡಿರಿ. ಕಿನ್ನರಿಯಿಂದಲೂ, ಕೀರ್ತನೆಯ ಶಬ್ದದಿಂದಲೂ ಹಾಡಿರಿ.
6ತುತೂರಿಗಳಿಂದಲೂ, ಹೌದು, ಟಗರಿನ ಕೊಂಬಿನಿಂದಲೂ ಯೆಹೋವ ರಾಜರ ಮುಂದೆ ಆನಂದಘೋಷ ಮಾಡಿರಿ.
7ಸಮುದ್ರವೂ, ಅದರಲ್ಲಿರುವುದೆಲ್ಲವೂ, ಲೋಕವೂ, ಅದರ ನಿವಾಸಿಗಳೂ ಪ್ರತಿಧ್ವನಿಸಲಿ.
8ನದಿಗಳು ಚಪ್ಪಾಳೆ ತಟ್ಟಲಿ. ಬೆಟ್ಟಗಳು ಒಟ್ಟುಗೂಡಿ ಆನಂದ ಕೀರ್ತನೆ ಹಾಡಲಿ.
9ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.