Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಪರಮಗೀತೆ 6

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವಂತೆ ನಿನ್ನ ಪ್ರಿಯನು ಯಾವ ಕಡೆಗೆ ಹೋಗಿದ್ದಾನೆ? ಪ್ರಿಯತಮೆ
2ನನ್ನ ಪ್ರಿಯನು ತೋಟಗಳಲ್ಲಿ ಮಂದೆ ಮೇಯಿಸುವುದಕ್ಕೂ, ನೆಲದಾವರೆಗಳನ್ನು ಕೊಯ್ದು ತರುವುದಕ್ಕೂ, ಸುಗಂಧ ಸಸ್ಯಗಳಿರುವ ಉದ್ಯಾನವನಕ್ಕೆ ಹೋಗಿದ್ದಾನೆ.
3ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ. ಪ್ರಿಯಕರ
4ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ, ಯೆರೂಸಲೇಮಿನ ಹಾಗೆ ರಮ್ಯಳು, ಧ್ವಜಗಳಿರುವ ದಂಡಿನ ಹಾಗೆ ಗಂಭೀರಳೂ ಆಗಿರುವೆ.
5ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಏಕೆಂದರೆ ಅವು ನನ್ನನ್ನು ಜಯಿಸಿವೆ. ನಿನ್ನ ತಲೆಗೂದಲು ಗಿಲ್ಯಾದ್ ಪರ್ವತದಿಂದ ಇಳಿಯುವ ಮೇಕೆಯ ಮಂದೆಯಂತಿದೆ.
6ನಿನ್ನ ಹಲ್ಲುಗಳ ಹೊಳಪು ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಗೆ ಸಮಾನ. ಅವು ಜೊತೆಯಾಗಿಯೇ ಇರುತ್ತವೆ. ಅವುಗಳಲ್ಲಿ ಒಂದೂ ಒಂಟಿಯಾಗಿರದು.
7ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.
8ಅರಸನಿಗೆ ಅರವತ್ತು ಮಂದಿ ರಾಣಿಯರೂ ಎಂಬತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.
9ಆದರೆ ನನಗೆ ನನ್ನ ಪಾರಿವಾಳವು, ನನ್ನ ಪರಿಪೂರ್ಣಳು ಒಬ್ಬಳೇ. ಇವಳು ತನ್ನ ತಾಯಿಗೆ ಒಬ್ಬಳೇ ಮಗಳು. ತನ್ನ ಹೆತ್ತವಳಿಗೆ ಪ್ರಿಯಳು. ಕನ್ನಿಕೆಯರು ಇವಳನ್ನು ಕಂಡು ಆಶೀರ್ವದಿಸಿದರು. ಹೌದು, ರಾಣಿಯರೂ ಉಪಪತ್ನಿಯರೂ ಇವಳನ್ನು ಹೀಗೆಂದು ಹೊಗಳಿದರು: ಸ್ನೇಹಿತರು
10ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ, ಚಂದ್ರನ ಹಾಗೆ ಸುಂದರಿಯೂ, ಸೂರ್ಯನ ಹಾಗೆ ಪ್ರಕಾಶಿಸುವವಳೂ ಆಗಿರುವ ಈ ಉದಯವಂತೆ ಯಾರು? ಪ್ರಿಯಕರ
11ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.
12ನಾನು ಅದನ್ನು ಅರಿತುಕೊಳ್ಳುವ ಮೊದಲು, ನನ್ನ ಆಸೆ ನನ್ನ ಜನ ಪ್ರಧಾನರ ನಡುವೆ ರಥದ ಮೇಲೆ ಕೂತಿರುವಂತೆ ನನ್ನನ್ನು ನಡೆಸಿತು. ಸ್ನೇಹಿತರು
13ತಿರುಗಿ ಬಾ, ತಿರುಗಿ ಬಾ, ಶೂಲಮ್ ಊರಿನವಳೇ, ನಾವು ನಿನ್ನನ್ನು ನೋಡುವಂತೆ ತಿರುಗಿ ಬಾ, ತಿರುಗಿ ಬಾ! ಪ್ರಿಯಕರ ಎರಡು ಗುಂಪಿನ ನರ್ತಕಿಯರ ನಡುವೆ ಕುಣಿಯುತ್ತಿರುವ, ಶೂಲಮ್ ಊರಿನವಳನ್ನು ನೀವು ನೋಡುವುದೇಕೆ?
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.