Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಜೆಕರ್ಯ 5

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಆಗ ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಲು, ಹಾರುವ ಸುರುಳಿ ಕಾಣಿಸಿತು.
2ಆಗ ದೂತನು ನನಗೆ, “ಏನು ನೋಡುತ್ತೀ?” ಎಂದಾಗ, ನಾನು, “ಹಾರುವ ಸುರುಳಿಯನ್ನು ನೋಡುತ್ತಿದ್ದೇನೆ. ಅದರ ಉದ್ದವು ಒಂಬತ್ತು ಮೀಟರ್, ಅದರ ಅಗಲವು ನಾಲ್ಕುವರೆ ಮೀಟರ್ ಇದೆ,” ಎಂದೆನು.
3ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು.
4‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ” ಬುಟ್ಟಿಯಲ್ಲಿ ಸ್ತ್ರೀ
5ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ನಿನ್ನ ಕಣ್ಣೆತ್ತಿ ಹೊರಡುವಂಥದ್ದು ಏನೆಂದು ನೋಡು,” ಎಂದು ನನಗೆ ಹೇಳಿದನು.
6ನಾನು, “ಇದೇನು?” ಎಂದು ಕೇಳಿದಾಗ, ಅವನು, “ಇದು ಅಳೆಯುವ ಬುಟ್ಟಿ,” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು,” ಎಂದನು.
7ಸೀಸದ ಮುಚ್ಚಳವು ತೆಗೆಯಲಾಯಿತು. ಆ ಬುಟ್ಟಿಯಲ್ಲಿ ಒಬ್ಬ ಸ್ತ್ರೀ ಕುಳಿತುಕೊಂಡಿದ್ದಳು.
8ಆತನು, “ಇದು ದುಷ್ಟತ್ವವು,” ಎಂದು ಹೇಳಿ ಆಕೆಯನ್ನು ಬುಟ್ಟಿಯಲ್ಲಿ ಪುನಃ ಅದುಮಿ, ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.
9ಆಗ ನಾನು ಕಣ್ಣೆತ್ತಿ ನೋಡಿದಾಗ, ಇಬ್ಬರು ಸ್ತ್ರೀಯರು ಇದ್ದರು. ಅವರ ರೆಕ್ಕೆಗಳು ರಭಸವಾಗಿದ್ದವು. ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು. ಅವರು ಆಕಾಶ ಮತ್ತು ಭೂಮಿಯ ನಡುವೆ ಬುಟ್ಟಿಯನ್ನು ಎತ್ತಿದರು.
10ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದೆನು.
11ದೂತನು ನನಗೆ, “ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವುದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿತವಾಗಿ, ತನ್ನ ಸ್ಥಾನದಲ್ಲಿ ಇರಿಸಲಾಗುವುದು,” ಎಂದನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.